ಮೂಡುಬಿದರೆಯಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ನೀರ್ಕರೆ ಇವುಗಳ ಸಹಯೋಗದಲ್ಲಿ ಪ್ರೌಢ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು ನೀರ್ಕೆರೆಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.ತೆಂಕಮಿಜಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು.

ಸರಕಾರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯೊಂದಿಗೆ ಆಟವನ್ನು ಆಡಬೇಕು. ಖೋ ಖೋ ಕ್ರೀಡೆಯನ್ನು ತಮ್ಮ ಸಾಮರ್ಥ್ಯ ಬಳಸಿ ಚುರುಕುತ ನ, ವೇಗ ಮತ್ತು ಯುಕ್ತಿಯಿಂದ ಆಡಿದರೆ ಯಶಸ್ಸು ಖಂಡಿತ ಎಂದು ಹೇಳಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾನಿ ಚಂದ್ರಶೇಖರ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ.ಉಪಾಧ್ಯಕ್ಷ ಸಮಿತಾ, ಪ್ರಭಾರ ಸಮೂಹ ಸಮನ್ವಯ ಅಧಿಕಾರಿ ಸೌಮ್ಯ ಇಸಿಒ ರಾಜೇಶ್ ಭಟ್, ಎಸ್‍ಡಿಎಂಸಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಉಪಾಧ್ಯಕ್ಷ ಮಹೇಶ್, ಮುಖ್ಯ ಶಿಕ್ಷಕಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಮುನ, ಹೊನ್ನಪ್ಪ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು.