ಮೂಡುಬಿದರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.