ಸರಕಾರಿ ಕಛೇರಿಗಳಿಗೆ ಸಂವಿಧಾನ ಪೀಠಿಕೆಯ ಭಾವಚಿತ್ರ ವಿತರಣೆ
ಮೂಡುಬಿದಿರೆ : ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ(ರಿ) ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕಿನ ಘಟಕದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೋಟೋಗಳನ್ನು ಸರ್ಕಾರಿ ಕಚೇರಿಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.



ಸಮಿತಿಯ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿ ಗೋಪಾಲ, ಮಹಿಳಾ ಘಟಕದ ಸಹ ಕಾರ್ಯದರ್ಶಿಗಳಾದ ಲೀಲಾ ಮತ್ತು ಪದ್ಮ,ಸದಸ್ಯೆ ವಿನಂತಿ ಉಪಸ್ಥಿತರಿದ್ದರು.


















