ಮೂಡುಬಿದಿರೆ: ಗಾಂಜಾ ಮಾರಾಟ, ಮೂವರು ಪೊಲೀಸರ ವಶಕ್ಕೆ

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂವರು ವ್ಯಕ್ತಿಗಳ ಸಹಿತ ೮೦೦ ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ೬೨,೦೦೦ ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನಿರ್ದೇಶನದಲ್ಲಿ ಈ ಕಾರ್ಯಚರಣೆ ನಡೆದಿದ್ದು ಪೊಲೀಸ್ ಉಪ ನಿರೀಕ್ಷಕರಾದ ದಿವಾಕರ ರೈ, ಸಿದ್ದಪ್ಪ ನರನೂರ ಮತ್ತು ಸಿಬ್ಬಂದಿಗಳಾದ ಪ್ರಶಾಂತ್, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಹುಸೇನ್, ಅಕೀಲ್ ಮಹಮ್ಮದ್, ವೆಂಕಟೇಶ್ ಮತ್ತು ಇತರ ಸಿಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.