ಮೂಡುಬಿದಿರೆ :ಮಿಥುನ್ ರೈ ಭಾವಚಿತ್ರವಿದ್ದ ಫ್ಲೆಕ್ಸ್‌ಗೆ ಹಾನಿ
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡುಬಿದಿರೆ ಪರಿಸರದಲ್ಲಿ ಹಾಕಿರುವ ಫ್ಲೆಕ್ಸ್‌ಗಳನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಲ್ಲದೆ ಮಿಥುನ್ ರೈ ಪೋಟೋಕೆ ಹಾನಿ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಮೂಡುಬಿದಿರೆ ಠಾಣೆಗೆ ದೂರು ನೀಡಿ ಫ್ಲೆಕ್ಸ್ ಹರಿದು ಹಾಕಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.