ಮೂಡುಬಿದಿರೆ : ಉದ್ಯಮಿ ಸುರೇಶ್ ಶೆಟ್ಟಿ ನಿಧನ
ಮೂಡುಬಿದಿರೆ : ಹೊಟೇಲ್ ಉದ್ಯಮಿ, ಕಡಲಕೆರೆ ಸೃಷ್ಟಿ ಮಲ್ಟಿ ಪರ್ಪಸ್ ಹಾಲ್ ನ ಮಾಲಕ ಸುರೇಶ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಅಲಂಗಾರು ಬಂಗೇರಬೆಟ್ಟು ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಅವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕೆಲವು ದಿನಗಳ ಹಿಂದೆ ಅಸೌಖ್ಯಕ್ಕೊಳಗಾದ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಲಂಗಾರ್ ಪೇಟೆಯಲ್ಲಿ ವರ್ತಕರು ಪೇಟೆಯ ಅಂಗಡಿಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಿದ್ದಾರೆ. ಅಭಿಮಾನಿ ಬಂಧುಗಳು ಶೋಕ ವ್ಯಕ್ತಪಡಿಸಿದ್ದಾರೆ.
ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಬಿಜೆಪಿ ಮುಖಂಡ ಸುದರ್ಶನ ಎಂ. ಸಂತಾಪ ವ್ಯಕ್ತಪಡಿಸಿದ್ದಾರೆ.