ಮೂಡುಬಿದಿರೆ: ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಾಚಲಪತಿ, ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು ಪ್ರಾಂಶುಪಾಲರಾದ ಪ್ರಶಾಂತ್ ಸಿ.ಎಂ. ಹಸಿರು ನಿಶಾನೆ ಹಾರಿಸುವ ಮೂಲಕ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಉತ್ತಮ ನಾಯಕನನ್ನು ಮೊದಲ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿ. ಎಪ್ರಿಲ್ 26 ರಂದು ಎಲ್ಲರೂ ತಪ್ಪದೇ ಮತವನ್ನು ಹಾಕಿ ಎಂದರು. ಬಳಿಕ ಮತದಾನ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮೈಟ್ ಕಾಲೇಜು ಪ್ರಾಂಶುಪಾಲರಾದ ಪ್ರಶಾಂತ್ ಸಿ.ಎಂ ಮಾತನಾಡಿ, ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಆದ್ದರಿಂದ ನಾವು ಮೂಡುಬಿದಿರೆ ಜನರಿಗೆ ಮತದಾನದ ಜಾಗೃತಿಯನ್ನು ಕಾಲ್ನಡಿಗೆ ಜಾಥದ ಮೂಲಕ ಅರಿವು ಮೂಡಿಸುವ ಕೆಲಸವನ್ನು ಮಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಮಾಡುವ ಮೂಲಕ ಉತ್ತಮ ನಾಯಕನ ಆಯ್ಕೆಯಾಗಲಿ ಎಂದರು.

ಕಾಲ್ನಡಿಗೆ ಜಾಥವು ಮೂಡುಬಿದಿರೆ ತಾಲೂಕು ಪಂಚಾಯತ್ ಆವರಣದಿಂದ ಹೊರಟು ಪುರಸಭೆ ಮುಂಭಾಗದಿಂದ ತೆರಳಿ ಸ್ವರಾಜ್ಯ ಮೈದಾನದ ಬಳಿಯಿಂದ ಆಳ್ವಾಸ್ ಹೆಲ್ತ್ ಸೆಂಟ್ರರ್ ಮೂಲಕ ನಿಶ್ಮಿತಾ ಟವರ್ ಮುಂಭಾಗದಿಂದ ಮೂಡುಬಿದಿರೆ ಮೂಖ್ಯ ಪೇಟೆಗೆ ತಲುಪಿ ಹನುಮಾನ್ ದೇವಸ್ಥಾನದ ಮೂಲಕ ಹಳೆ ಪೋಲಿಸ್ ಠಾಣೆಯಿಂದ ತಿರುಗಿ ಅಮರಶ್ರೀ ಮೂಲಕ ತೆರಳಿ ವಾಪಸ್ ಮೂಡುಬಿದಿರೆ ತಾಲೂಕು ಪಂಚಾಯತ್ ನಲ್ಲಿ ಸಮಾಪನಗೊಂಡಿತು.

ಜಾಥಾದುದ್ದಕ್ಕೂ ಪಂಚಾಯತ್ ಸಿಬ್ಬಂದಿಗಳಾದ ರಾಕೇಶ್ ಹಾಗೂ ಪ್ರಶಾಂತ್ ಅವರು ಮತದಾನದ ಮಾಹಿತಿಯನ್ನು ಸ್ವಚ್ಚತಾ ವಾಹಿನಿಯ ಮೂಲಕ ನೀಡಿದರು. ಸಹಾಯಕ ನಿರ್ದೇಶಕರಾದ ಸಾಯಿಶ ಚೌಟ ಅವರು ಕಾರ್ಯಕ್ರಮ ನಿರೂಪಿಸಿದರು.

ಜಾಥಾದಲ್ಲಿ ಮೈಟ್ ಕಾಲೇಜು ದೈ.ಶಿ.ಉಪನ್ಯಾಸಕ ಶಮಿತ್, ಪೋಲಿಸ್ ಠಾಣಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು, ಗೃಂತಾಲಯ ಮೇಲ್ವಿಚಾರಕರು, ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಹಾಗೂ ಮೈಟ್ ಕಾಲೇಜು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸ್ವಚ್ಚತಾ ವಾಹನಗಳು ಸೇರಿದಂತೆ ಜಾಥಾದಲ್ಲಿ ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳನ್ನು ಸ್ವೀಪ್ -2024 ರಂತೆ ನಿಲ್ಲಿಸಿ, ಮತದಾನ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಸಹಿ ಅಭಿಯಾನದಡಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಸಹಿಯನ್ನು ಪಡೆಯಲಾಯಿತು.

Related Posts

Leave a Reply

Your email address will not be published.