ಮೂಡುಬಿದಿರೆ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ.
ಮೂಡುಬಿದಿರೆ: ಇಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್.ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಶ್ರೀಧರ್ ಅವರು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಈ ಹಿಂದೆ ಮೂಡುಬಿದಿರೆ ವಲಯಾರಣ್ಯಾಧಿಕಾರಿಯಾಗಿ ಮೂಡುಬಿದಿರೆಯಲ್ಲಿ ಸೇವೆ ಸಲ್ಲಿಸಿದ್ದ ಶ್ರೀಧರ್ ಅವರು ದಕ್ಷ ಅಧಿಕಾರಿಯಾಗಿ ಗಮನ ಸೆಳೆದಿದ್ದರು.