ಮೂಡುಬಿದಿರೆ: ವಿದ್ಯಾರ್ಥಿಗೆ ಕಾರು ಢಿಕ್ಕಿ – ಸಾವು

ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಬನ್ನಡ್ಕದಲ್ಲಿ ಸಂಭವಿಸಿದೆ.
ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.
ವಿದ್ಯಾರ್ಥಿ ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೊರಟಿದ್ದು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಕಾರಿನವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯಾರಿಗೋ ಉಪಕಾರ ಮಾಡಲೆಂದು ಹೋಗಿ ಈ ಸ್ಥಳದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದ್ದು ಇದರಿಂದಾಗು ಎದುರಿನಲ್ಲಿ ಬರುತ್ತಿರುವ ವಾಹನಗಳು ಗಮನಕ್ಕೆ ಬಾರದೆ ಇರುವುದರಿಂದ ಇಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇಂದು ವಿದ್ಯಾರ್ಥಿಯೋರ್ವನನ್ನು ಬಲಿ ತೆಗೆದುಕೊಂಡಿದೆ.

Add - Clair veda ayur clinic

Related Posts

Leave a Reply

Your email address will not be published.