HomeFresh Newsಮೂಡುಬಿದಿರೆ: ಆಳ್ವಾಸ್ ಕೃಷಿ ಇಂಜಿನಿಯರಿಂಗ್ ವಿಭಾಗಕ್ಕೆ 4 ರ‍್ಯಾಂಕ್

ಮೂಡುಬಿದಿರೆ: ಆಳ್ವಾಸ್ ಕೃಷಿ ಇಂಜಿನಿಯರಿಂಗ್ ವಿಭಾಗಕ್ಕೆ 4 ರ‍್ಯಾಂಕ್

ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಾದ ಸಂತೋಷ ಎಂ. ದ್ವಿತೀಯ ರ‍್ಯಾಂಕ್, ತೇಜಸ್ ತೃತೀಯ ರ‍್ಯಾಂಕ್, ಮೋನಿಷಾ 8ನೇ ರ‍್ಯಾಂಕ್, ಕಿರಣ್ ವಿ. 9ನೇ ರ‍್ಯಾಂಕ್‌ಗಳಿಸಿದ್ದಾರೆ. ರ‍್ಯಾಂಕ್ ವಿಜೇತರನ್ನು ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.

add - BDG

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments