ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ
ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್. ಆರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.