ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು.

ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ನಾಲ್ಕು ದಿನಗಳ ಪ್ರದರ್ಶನ ಹಾಗೂ ಮಹಾಮೇಳವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ವಿರಾಸತ್ ಇಂದು ರಾಜ್ಯದಾದ್ಯಂತ ಮನೆಮಾತಾಗಿದೆ. ಡಾ.ಎಂ. ಮೋಹನ ಆಳ್ವ ಅವರು ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದ ಅದ್ವಿತೀಯ ನಾಯಕರಾಗಿದ್ದಾರೆ. ಪ್ರತಿ ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವ ಅವರ ಗುಣ ಹಾಗೂ ಶೈಕ್ಷಣಿಕ ಬದಲಾವಣೆಗೆ ತ್ವರಿತವಾಗಿ ಸ್ಪಂದಿಸುವ ರೀತಿ ಅನನ್ಯ ಎಂದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಉದ್ಯಮಿ ಕೆ. ಶ್ರೀಪತಿ ಭಟ್, ಮೂಡುಬಿದಿರೆಯ ಎಂ.ಸಿ.ಎಸ್. ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಮೂಡುಬಿದಿರೆ ಎಂ. ಸಿ. ಎಸ್. ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ ದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ. ಧನಂಜಯ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ನಿವೃತ್ತ ಐಎಫ್ ಎಸ್ ಅಧಿಕಾರಿ, ವನ್ಯಜೀವಿ ಛಾಯಾಗ್ರಾಹಕ ಎನ್. ಜಯಕುಮಾರ್, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ಚೌಟರ ಅರಮನೆಯ ಕುಲದೀಪ್ ಎಂ., ಪ್ರಮುಖರಾದ ಬಾಲಕೃಷ್ಣ ಶೆಟ್ಟಿ, ಮೋಹನ್ ದೇವ ಆಳ್ವ, ಶ್ರೀನಿವಾಸ ಮತ್ತಿರರು ಉಪಸ್ಥಿತರಿದ್ದರು.
