ಮೂಡುಬಿದಿರೆ: ಕಬಡ್ಡಿ ಅಳಿಯೂರು ಸರ್ಕಾರಿ ಪ್ರೌಢ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
