ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ
ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು.
ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ, ಬ್ರಹ್ಮಕಲಶೋತ್ಸವ ಸಮಿತಿಯ ಆಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ಪ್ರಚಾರ ಸಮಿತಿಯ ಪ್ರಮುಖ, ಪತ್ರಕರ್ತ ಆರ್. ಸಿ. ಭಟ್, ಮಾತೃ ಸಮಿತಿಯ ಸಂಚಾಲಕಿ ವಿನುತಾ ಪಾತಿಕಲ್ಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.