MRPL 4 ನೇ ಹಂತದ ನಿರ್ವಸಿತರ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಅಧಿಕಾರಿಗಳ ಸ್ಪಂದನೆ

ಸುರತ್ಕಲ್ : MRPL 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ತಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜು.12ರಂದು ಮಹತ್ವದ ಸಭೆ ನಡೆಯಿತು.

ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತಾನಾಡಿ MRPL ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ ದೊರಕಬೇಕಾದ ಸವಲತ್ತುಗಳನ್ನು ಯವುದೇ ನಿಬಂದನೆಗಳಿಲ್ಲದೆ ಅಧಿಸೂಚನೆಗೆ ಮೊದಲು ಇದ್ದ ಎಲ್ಲಾ ಮನೆಗಳಿಗೆ ಸೂಕ್ತ ಪುನರ್ವಸತಿ ಮತ್ತು ಉದ್ಯೋಗ ವಿಳಂಬ ಮಾಡದೆ ಶೀಘ್ರವಾಗಿ ಕಲಿಸುವ ಬಗ್ಗೆ ಸಭೆಯಲ್ಲಿ ಆಗ್ರಹಿಸಲಾಯಿತು.

ಸುಧೀರ್ಘ ನಡೆದ ಸಭೆಯಲ್ಲಿ ಕೊನೆಗೆ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು MRPL ನ ಅಧಿಕಾರಿಗಳು ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರು.

ಭೂ ನಿರ್ವಸಿತರ ಹಿತರಕ್ಷಣಾ ಸಮಿತಿ ಹರ್ಷ!

ಹಲಾವರು ವರ್ಷಗಳಿಂದ ಬಾಕಿ ಉಳಿದಿದ್ದ MRPL ನ 4 ನೇ ಹಂತದ ಭೂಸ್ವಾಧೀನತೆ ವೇಳೆ ನಿರ್ವಸಿತ ಕುಟುಂಬಗಳ ಉದ್ಯೋಗ ಹಾಗೂ ಪುನರ್‌ ವಸತಿಯ ಬೇಡಿಕೆಗೆ ಸ್ಪಂದಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಉಮಾನಾಥ ಕೋಟ್ಯನ್ ಅವರಿಗೆ ಅದೇ ರೀತಿ ದ.ಕ.ಜಿಲ್ಲಾಧಿಕಾರಿ ಹಾಗೂ MRPL ಅಧಿಕಾರಿಗಳಿಗೆ ಭೂ ನಿರ್ವಂತರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಗ್ರಾಮಸ್ತರು ಅಭಿನಂದನೆ ಸಲ್ಲಿಸಿದ್ದಾರೆ.

ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ವಿಶೇಷ ಭೂಸ್ವಾದಿನಾಧಿಕಾರಿ, MRPL ನ ಅಧಿಕಾರಿಗಳ ಮತ್ತು ಭೂ ನಿರ್ವಸಿತರ ಹಿತರಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.