ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು ಶುಕ್ರವಾರ ಬೆಳಗಿನ ವೇಳೆ ತನ್ನ ಉದ್ಯಮ ಮಳಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದರು, ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಗೌರವಾಧ್ಯಕ್ಷರಾಗಿದ್ದರು.
