ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನವನ್ನು ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ಮತದಾನ ಮಾಡುವ ಅವಕಾಶವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು.
ನಮಗೆ ಮೂಲಭೂತ ಸೌಲಭ್ಯ ಬೇಕಾದಲ್ಲಿ ನಾವು ಉತ್ತಮ ನಾಯಕನ ಆಯ್ಕೆ ಮಾಡಬೇಕು ಹಾಗೂ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸಿ ಮಾಹಿತಿ ತಿಳಿದುಕೊಳ್ಳಬೇಕು. ಜ. 26ರಿಂದ ಸಂವಿಧಾನದ ಪೀಠಿಕೆಯ ಸ್ಥಬ್ಧ ಚಿತ್ರದ ವಾಹನ ಜಾಥಾವು ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬರಲಿದ್ದು ಅದನ್ನು ವೀಕ್ಷಿಸಿ ಅದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ತಾಲೂಕು ಸ್ವೀಪ್ ಸಮಿತಿ ನೋಡೆಲ್ ಹಾಗೂ ಮಹಾವೀರ ಕಾಲೇಜಿನ ಉಪನ್ಯಾಸಕಿ ಪೂರ್ಣಿಮಾ ಇವರು ಮಾತನಾಡಿ, ಹಿಂದಿನ ಕಾಲದಲ್ಲಿ ಇದ್ದಂತಹ ಉತ್ಸಾಹ ಇಂದಿನ ದಿನಗಳಲ್ಲಿ ಯುವಜನತೆಯಲ್ಲಿ ಕಡಿಮೆಯಾಗುತ್ತಿದೆ. ಮತದಾನದ ಮಹತ್ವ ಅರಿತು ಯುವಜನತೆ ಆಸಕ್ತಿವಹಿಸಿ ಉತ್ತಮ ನಾಯಕನನ್ನು ಆರಿಸುವ ಹಕ್ಕನ್ನು ಚಲಾಯಿಸಿ ಎಂದು ತಿಳಿಸಿದರು.

ಮತದಾನ ಮಹತ್ವದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

ಮತದಾರರ ದಿನಾಚರಣೆಯ ಅಂಗವಾಗಿ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಇಂಗ್ಲಿಷ್ ಹಾಗೂ ಕನ್ನಡ ಪ್ರಬಂಧ ಸರ್ಧೆ, ಭಿತ್ತಿ ಚಿತ್ರ ತಯಾರಿ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ಉಪತಹಶೀಲ್ದಾರ್ ರಾಮು, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು ವಿದ್ಯಾರ್ಥಿಗಳು, ಕಾಲೇಜು ಉಪನ್ಯಾಸಕರು, ತಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಹಾಯಕ ನಿರ್ದೇಶಕ ಸಾಯಿಷ್ ಚೌಟ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ತಾ.ಪಂ. ವಿಷಯ ನಿರ್ವಾಹಕರಾದ ಸುನಂದ ಬಿ.ಜೈನ್ ವಂದಿಸಿದರು.

Related Posts

Leave a Reply

Your email address will not be published.