ಮೂಡುಬಿದಿರೆ: ಮಹಿಳೆಯರಲ್ಲಿ ಮಾನಸಿಕ ಒತ್ತಡ- ಪರಿಹಾರೋಪಾಯಗಳು: ಮಾಹಿತಿ ಶಿಬಿರ

ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಮಾನಸಿಕ ಒತ್ತಡ – ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ಶಿಬಿರವು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆ ಸಂಸ್ಥೆಯ ಸ್ಟುಡೆಂಟ್ ಕೌನ್ಸೆಲ್ಲರ್ ಡಾ. ರಾಯನ್ ಮಥಾಯಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಮಾನಸಿಕ ಒತ್ತಡಗಳಿಗೆ ಕಾರಣಗಳು ಏನೆಂಬುದನ್ನು ಹಾಗೂ ಅದಕ್ಕೆ ಪರಿಹಾರಗಳು ಏನು ಎಂಬುದರ ಬಗ್ಗೆ ವಿಶೇಷ ಮಾಹಿತಿಯನ್ನು ತಮ್ಮ ಉಪನ್ಯಾಸದಲ್ಲಿ ಪ್ರಸ್ತುತಪಡಿಸಿದರು.
ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ ಹೆಗ್ಡೆ, ಕಾರ್ಯದರ್ಶಿ ಸೌಮ್ಯ ಎಸ್ ಶೆಟ್ಟಿ ಕೋಶಾಧಿಕಾರಿ ಗೀತಾ ಪಿ ಶೆಟ್ಟಿ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು
.

Add - Clair veda ayur clinic

Related Posts

Leave a Reply

Your email address will not be published.