ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಮೊದಲ ಬಾರಿ ಆಯ್ಕೆಯಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಗ್ರಾಮವಾಗಿರುವ ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ ಒದಗಿಸಿರುವುದು ಹಾಗೂ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡು ಸರ್ವೋತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಿರುವುದನ್ನು ಗುರುತಿಸಿ ಪುತ್ತಿಗೆ ಪಂಚಾಯತ್ ನ್ನು ಆಯ್ಕೆ ಮಾಡಲಾಗಿದೆ.

Related Posts

Leave a Reply

Your email address will not be published.