ಮೂಡುಬಿದಿರೆ ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ
ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಮೂಡುಬಿದಿರೆಯಲ್ಲಿರುವ ಸಿಂಥೆಟಿಕ್ ಟ್ರ್ಯಾಕ್ ನ ಪ್ರಯೋಜನವನ್ನು ಪಡೆದುಕೊಂಡು ರಾಷ್ಟ್ರ- ಅಂತರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವಂತಹ ಕ್ರೀಡಾಪಟುಗಳಾಗಬೇಕೆಂದು ಶುಭ ಹಾರೈಸಿದರು.
ತಾಲೂಕು ತಹಶೀಲ್ದಾರ್ ಪ್ರದೀಪ್ ಹುರ್ಡೇಕರ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ದ.ಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕ ಮಂಜು, ತಾಲೂಕು ದೈ.ಶಿ.ಶಿ.ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಎಸ್., ದಸರಾ ಕ್ರೀಡಾಕೂಟದ ಮಂಗಳೂರು ತಾಲೂಕು ನೋಡೆಲ್ ಅಧಿಕಾರಿ ವಿನೋದ್ ಕುಮಾರ್, ತಾ.ಪಂ.ಸಹಾಯಕ ನಿರ್ದೇಶಕ ರಮೇಶ್ ರಾಥೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.