ಮೂಡುಬಿದರೆ: ಯುವಕ ನೇಣಿಗೆ ಶರಣು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
