ಮೂಡುಬಿದಿರೆ: ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟ, ದ.ಕ ಜಿಲ್ಲೆಗೆ ಪ್ರಥಮ ಸ್ಥಾನ
ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಇದರಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿನ ವಿದ್ಯಾರ್ಥಿಗಳಾದ ವಿನ್ಯಾಸ್ ವಿ ಪೂಜಾರಿ, ನಿಧೀಶಾ ಶೆಟ್ಟಿ, ಪ್ರಣಾಮ್ಯ ದೇವಾಡಿಗ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.