HomeFresh Newsಮೂಡುಬಿದರೆ: ಬೈಕ್-ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದರೆ: ಬೈಕ್-ಕಾರು ಢಿಕ್ಕಿ : ಯುವಕ ಸಾವು

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ.

ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವೃ ತರಹದ ಗಾಯವಾಗಿದ್ದು ಸ್ಥಳದಲ್ಲೇ ಆಸು ನೀಗಿದ್ದಾರೆ. ಮೂಡುಬಿದಿರೆ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments