HomeFresh Newsಮಸೀದಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮುಹಮ್ಮದ್ ಅಶ್ರಫ್ ನಿಗೂಢ ನಾಪತ್ತೆ; ಕೊಣಾಜೆ ಠಾಣೆಯಲ್ಲಿ ದೂರು...

ಮಸೀದಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮುಹಮ್ಮದ್ ಅಶ್ರಫ್ ನಿಗೂಢ ನಾಪತ್ತೆ; ಕೊಣಾಜೆ ಠಾಣೆಯಲ್ಲಿ ದೂರು ದಾಖಲು

ಮಸೀದಿಗೆ ಹೋಗಿ ಬರುತ್ತೇನೆಂದು ಹೇಳಿ ಸ್ಕೂಟರ್‌ನಲ್ಲಿ ಮನೆಯಿಂದ ಹೊರಟ ವ್ಯಕ್ತಿಯೋರ್ವರು ಜೂನ್ 30ರ ಮಂಗಳವಾರ ಸಂಜೆಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮಂಜನಾಡಿ ಗ್ರಾಮದ ಮಂಗಳಾಂತಿ ಕ್ವಾರ್ಟರ್ಸ್ ನಿವಾಸಿ ಮುಹಮ್ಮದ್ ಅಶ್ರಫ್ (40) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ 4:30ರ ಸುಮಾರಿಗೆ ಮುಹಮ್ಮದ್ ಅಶ್ರಫ್ ಅವರು ತಮ್ಮ ಸ್ಕೂಟರ್‌ನಲ್ಲಿ ಉರುಮಣೆ ಮಸೀದಿಗೆ ಹೋಗಿ ಬರುವುದಾಗಿ ಮನೆಯವರಿಗೆ ತಿಳಿಸಿ ತೆರಳಿದ್ದರು. ಆದರೆ, ಅವರು ಮಸೀದಿಗೂ ತಲುಪದೆ, ಇತ್ತ ಮನೆಗೂ ಮರಳದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಆತಂಕಗೊಂಡ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
ಸದ್ಯ ಅವರ ಸ್ಕೂಟರ್ ನಗರದ ಹೊರವಲಯದ ಗುರುಪುರ ಸೇತುವೆ ಮೇಲೆ ಪತ್ತೆಯಾಗಿದ್ದು ಪಲ್ಗುಣಿ ನದಿಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯ ಈಜುಗಾರರು ಹುಡುಕಾಟ ಆರಂಭಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments