ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ
ದಕ್ಷಿಣ ಕನ್ನಡ ಜಿಲ್ಲಾ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನ ಸಂಪರ್ಕ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ನವೆಂಬರ್ 27ರಂದು ನಗರದ ಡಾನ್ ಬಾಸ್ಕೋ ಹಾಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಮೇಕ್ಸಿಂ ಡಿಸಿಲ್ವ ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಬೇಡಿಕೆ, ಮುಂದಿನ ಕಾರ್ಯತಂತ್ರಗಳ ರೂಪಿಸುವಿಕೆ ಹಾಗೂ ವೇದಿಕೆಯ ಕಾನೂನು ಸಲಹೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜೋಸೆಪ್ ಮ್ಯಾಟ್ರಿಸ್, ಉಪೇಂದ್ರ ನಾಯಕ್ , ಅಲೋಶಿಯಸ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.