HomeFresh Newsಮೂಲ್ಕಿ: ಲಾರಿ ಚಾಲಕನ ಮಹಾ ಯಡವಟ್ಟು..!!

ಮೂಲ್ಕಿ: ಲಾರಿ ಚಾಲಕನ ಮಹಾ ಯಡವಟ್ಟು..!!

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೆÇಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ.

ಸ್ಕೂಟರ್ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೆÇಲೀಸ್ ಸಿಬ್ಬಂದಿ ಗೀತಾ, ಆಟೋ ಚಾಲಕ ಧರ್ಮೇಂದ್ರ ಗಾಯಗೊಂಡು ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಸಂದರ್ಭ ಸರ್ವಿಸ್ ರಸ್ತೆ ಬದಿ ಕುಳಿತಿದ್ದ ಉ.ಕ. ದ ಕೂಲಿ ಕಾರ್ಮಿಕರು ಜೀವ ಭಯದಿಂದ ಓಡಿ ಅನಾಹುತದಿಂದ ಪಾರಾಗಿದ್ದಾರೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೆÇಲೀಸರು, ಮುಲ್ಕಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments