ಮುಲ್ಕಿಯಲ್ಲಿ ಬಿಜೆಪಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ವಿರೋಧ ಪಕ್ಷದವರು ಎಲ್ಲಾ ರೀತಿಯ ಅಪಪ್ರಚಾರ ಮಾಡಿದ್ದು ಆದರೆ ಯಾವುದೇ ಅಪಪ್ರಚಾರಕ್ಕೆ ನಾನು ಉತ್ತರ ನೀಡಲಿಲ್ಲ. ವಿರೋಧಿಗಳ ಅಪಪ್ರಚಾರ ಅವರಿಗೇ ಮುಳುವಾಯಿತು. ಅಭಿವೃದ್ಧಿ ಕಾರ್ಯಗಳೇ ನನ್ನ ಕೈ ಹಿಡಿಯಿತು ಎಂದು ಉಮಾನಾಥ ಕೋಟ್ಯಾನ್ ಹೇಳಿದರು.

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಧಾಪನ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಅಭಿನಂದನಾ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ವಹಿಸಿದ್ದರು.
ಈ ಸಂದರ್ಭ ವೇದಿಕೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಉದ್ಯಮಿ ಸೂರ್ಯಕುಮಾರ್ ಹಳೆಯಂಗಡಿ, ಪಡುಪಣಂಬೂರು ಗ್ರಾಮ ಪಂಚಾಯತು ಉಪಾಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉದ್ಯಮಿಗಳಾದ ವಿಧ್ಯಾದರ್ ಶೆಟ್ಟಿ ಕೊಲ್ನಾಡುಗುತ್ತು, ಗೌತಮ್ ಜೈನ್ ಮೂಲ್ಕಿ ಸೀಮೆ ಅರಮನೆ, ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.
