ಮುಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಪತಿ ಆತ್ಮಹತ್ಯೆ
ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ ದುದೈರ್ವಿಗಳು ಎಂದು ತಿಳಿದು ಬಂದಿದೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ತಿಕ್ ಪಕ್ಷಿಕೆರೆ ಪಂಚಾಯತ್ ಬಳಿಯ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದು ಅಲ್ಲಿ ಪೊಲೀಸರು ತೆರಳಿದಾಗ ಬಾಗಿಲು ಹಾಕಿದ ಸ್ಥಿತಿಯಲ್ಲಿದ್ದು ಪರಿಶೀಲನೆ ನಡೆಸಿದಾಗ ಒಳಗಡೆ ಪತ್ನಿ ಮತ್ತು ನಾಲ್ಕು ವರ್ಷ ಪ್ರಾಯದ ಮಗುವಿನ ಶವ ಪತ್ತೆಯಾಗಿದೆ. ಮೂರು ದಿನಗಳಿಂದ ಬಾಗಿಲು ಮುಚ್ಚಿದ್ದು ಪತ್ನಿ ಮಗುವನ್ನು ಕೊಂದು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಕ್ಷಿಕೆರೆ ಜಂಕ್ಷನ್ ನಲ್ಲಿ “ಹೋಟೆಲ್ ಕಾರ್ತಿಕ್ ನಡೆಸುತ್ತಿರುವ ಜನಾರ್ಧನ ಭಟ್ ಎಂಬವರ ಮೂವರು ಮಕ್ಕಳಲ್ಲಿ ಒಬ್ಬನಾದ ಕಾರ್ತಿಕ್ ಕದ್ರಿಯ ಸೊಸೈಟಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ತನ್ನ ಸ್ಕೂಟರ್ ಅನ್ನು ಕಲ್ಲಾಪು ದೇವಸ್ಥಾನ ಬಳಿ ನಿಲ್ಲಿಸಿ ರೈಲು ಹಳಿಯಲ್ಲಿ ಹೋಗಿದ್ದು ಬಳಿಕ ಛಿದ್ರಗೊಂಡ ಸ್ಥಿತಿಯಲ್ಲಿ ಮೃತದೇಹ ಪಟ್ಟೆಯಾಗಿತ್ತು. ಮೂಲ್ಕಿ ಠಾಣಾ ಪೊಲೀಸರು ಪ್ರಕರಣ ದಾಖಳಿಸಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆಯಿದ್ದು ಮೂಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.