ಮೂಲ್ಕಿ ,ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ : ಉಮಾನಾಥ ಕೋಟ್ಯಾನ್ ಗೆ ಗ್ರಾಮಸ್ಥರ ಬೆಂಬಲ

ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ 7 ಕೋಟಿಗೂ ಅಧಿಕ ವೆಚ್ಚದ ಅನುದಾನ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ ಅಭಿವೃದ್ದಿಗೊಂಡಿದೆ. ಮತ್ತೊಮ್ಮೆ ಉಮಾನಾಥ ಕೋಟ್ಯಾನ್ ಅವರು ಬಂದರೆ ಉನ್ನತ ರೀತಿಯಲ್ಲಿ ಅಭಿವೃದ್ಧಿಯಾಗಲು ಸಾಧ್ಯ . ಈ ಬಾರಿಯೂ ಇರುವೈಲು ಗ್ರಾಮದಲ್ಲಿ ಗ್ರಾಮಸ್ಥರೆಲ್ಲರೂ ಉಮಾನಾಥ ಕೋಟ್ಯಾನ್ ಅವರಿಗೆ ಮತನೀಡಿ ಬಹುಮತದಿಂದ ಗೆಲ್ಲಿಸುವುದಾಗಿ ಗ್ರಾಮಸ್ಥರ ಪರವಾಗಿ ಸತೀಶ್ ತಂಗಿಲ ತಿಳಿಸಿದರು. ಪಂಚಾಯತ್ ಸದಸ್ಯರುಗಳು, ಬಿಜೆಪಿ ಕಾರ್ಯಕರ್ತರು, ಈ ಸಂದರ್ಭದಲ್ಲಿದ್ದರು.

Related Posts

Leave a Reply

Your email address will not be published.