ಮಂಗಳೂರು; ಮುಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ, ಹಾಲಿ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿ 21 ವರ್ಷದ ಸುಹಾನಾ ಬಂಧಿತ ಆರೋಪಿ.
ಸುಹಾನಾ ದಿನಾಂಕ:12-05-2026 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದಾಗ ಆಕೆಯನ್ನು ಬಂಧಿಸಿದ ಪೊಲೀಸರು ಅವಳ ಬಳಿ ಇದ್ದ ಸುಮಾರು 35,00,000/- ರೂ ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ್ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮಾಡಿ ಹಣ ಗಳಿಸುತ್ತಿದ್ದಳು ಎನ್ನಲಾಗಿದೆ. ಸುಹಾನಾ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ತಂಡ ದಿಂದ ಕಾರ್ಯಾಚರಣೆ ನಡೆಸಲಾಗಿದೆ.ಆರೋಪಿತೆಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ. ಕ್ರ 37/2026 ಕಲಂ: 8(C), 22(C) NDPS Act. ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act ನಡಿ ಪ್ರಕರಣ ದಾಖಲಾಗಿದೆ.
