HomeFresh Newsಬಹುಸಂಸ್ಕೃತಿ ಉತ್ಸವ : ಮುಖ್ಯಮಂತ್ರಿಗೆ ಆಹ್ವಾನ

ಬಹುಸಂಸ್ಕೃತಿ ಉತ್ಸವ : ಮುಖ್ಯಮಂತ್ರಿಗೆ ಆಹ್ವಾನ

ಬೆಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ ನೀಡಿದರು .
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ ಅಕಾಡೆಮಿ, ಕೊಡವ ಅಕಾಡೆಮಿ ಹಾಗೂ ಯಕ್ಷಗಾನ ಅಕಾಡೆಮಿ ಜಂಟಿಯಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವವನ್ನು ಆಯೋಜಿಸಿದೆ.
ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಮ್ ಸ್ಟ್ಯಾನಿ ಆಳ್ವಾರಿಸ್ , ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ , ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಶಿವರಾಮ ಶೆಟ್ಟಿ ತಲ್ಲೂರು ಉಪಸ್ಥಿತರಿದ್ದರು.

Add - Clair veda ayur clinic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments