ಜೂನ್ 3ರಂದು ದಿ.ಜಾರ್ಜ್ ಫೆರ್ನಾಂಡಿಸ್ ರವರ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ
ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ.
ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ ಜನ್ಮದಿನಾಚರಣೆ ಅಂಗವಾಗಿ ಜೂನ್ 3 ರಂದು ಅವರ ಸ್ಮರಣಾರ್ಥ ರಾಷ್ಟೀಯ ಪ್ರಶಸ್ತಿ ಪ್ರದಾನ ಸಮಾರಂಭ ರಂಜನಿ ಸುಧಾಕರ ಹೆಗ್ಡೆ ಸಭಾಗೃಹ, ಬಂಟರ ಭವನ ಅನೆಕ್ಸ್ ಹಾಲ್, ಕುರ್ಲಾ ಪೂರ್ವ ಇಲ್ಲಿ ನಡೆಯಲಿದೆ.
ಪದ್ಮವಿಭೂಷಣ ಡಾ. ಬಿ. ಎಂ. ಹೆಗ್ಡೆ ಯವರು ಗೌರವ ಅಧ್ಯಕ್ಷರಾಗಿರುವ, ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಸಮಾರಂಭವು ಸಮಿತಿಯ ಅಧ್ಯಕ್ಷರಾದ ಎಲ್. ವಿ. ಅಮೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉತ್ತರ ಮುಂಬಯಿ ಸಂಸದರಾದ ಗೋಪಾಲ ಶೆಟ್ಟಿಯವರು ಉದ್ಘಾಟಿಸಲಿರುವರು.
ಮುಖ್ಯ ಅತಿಥಿಗಳಾಗಿ ಮಾಜಿ ಎಮ್‍ಎಲ್‍ಸಿ ಐವನ್ ಡಿಸೋಜಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಶಾಸಕರಾದ ಯಶಪಾಲ್ ಎ.ಸುವರ್ಣ, ಸುಧಾಕರ ಎಸ್ ಹೆಗ್ಡೆ ಭಾಗವಹಿಸಲಿದ್ದಾರೆ. ಪ್ರತಿ ವರ್ಷ ಭಾರತದ ಮಾಜಿ ರಕ್ಷಣಾ ಸಚಿವ, ಜಾರ್ಜ್ ಫೆರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಅರಣ್ಯ ಸೃಷ್ಟಿಕರ್ತರು ಸಹ ಸಂಸ್ಥಾಪಕರು ರಾಧಾಕೃಷ್ಣ ನಾಯರ್ ಅವರಿಗೆ ನೀಡಿ ಸನ್ಮಾನಿಸಲಿದ್ದಾರೆ.