ಮುಂಬೈ: NDA ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲ – ರಮಾನಾಥ ರೈ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ. ಜನಪರ ಸೇವೆಯ ಬದಲಾಗಿ ಜನವಿರೋಧಿ ಧೋರಣೆಗಳು ಮತ್ತು ಸರ್ಕಾರಿ ಸೊತ್ತನ್ನು ಖಾಸಾಗಿಕರಣ ಗೊಳಿಸಿ ಬಂಡವಾಳಶಾಹಿಗಳ ಸಾಲಮನ್ನವೇ ಎನ್‌ಡಿಎ ಸಾಧನೆಯಾಗಿದೆ. ಇಂತಹ ಮೋದಿ ಮುಂದಾಳುತ್ವದ ಎನ್‌ಡಿಎ ಸರ್ಕಾರದ ವೈಫಲ್ಯಗಳು, ಆಳ್ವಿಕೆಯ ರೀತಿ, ಸಂವಿಂಧಾನ ಮತ್ತು ಪ್ರಜಾಪ್ರಭುತ್ವದ ಜನವಿರೋಧಿ ನೀತಿಯನ್ನು ಮನವರಿಸಿ ಈ ಬಾರಿ ಮತದಾರರರು ಯಾಕೆ ಇಂಡಿಯಾ ಒಕ್ಕೂಟಕ್ಕೆ ಮತನೀಡಬೇಕೆಂದು ಮನವರಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ ಮುಂಬಯಿ ದೊಡ್ಡ ಸಂಖ್ಯೆಯಲ್ಲಿ ತುಳು ಕನ್ನಡಿಗರನ್ನು ಹೊಂದಿದ ಮಹಾನಗರವಾಗಿದೆ. ಅದರಲ್ಲೂ ಕರ್ನಾಟಕದ ಕರಾವಳಿಯ ಜನತೆಯದ್ದೇ ಹೆಚ್ಚಿನ ಕಾರುಬಾರು. ಹೊಟೇಲು ಉದ್ಯಮದಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಿಂಚಿದವರಾಗಿದ್ದಾರೆ. ಅಭಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೈನ್ ಸ್ವಿಚ್ ಮುಂಬಯಿಗರಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂಬ ಸುಳಿವು ನೀಡಿ ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್ ಬಗೆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿ ಲೋಕಸಭಾ ಚುನಾವಣೆಯ ನಂತರ ಶಿಂಧೆ ಸರ್ಕಾರವೇ ಪತನದ ಬಗ್ಗೆ ಅನುಮಾನವಿದೆ ಎಂದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವ ಸುರೇಶ್ ಎಸ್.ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ, ಮಾಜಿ ಎಂಎಲ್‌ಸಿ ಐವಾನ್ ಡಿ’ಸೋಜಾ, ಮುಂಬಯಿ ಕಾಂಗ್ರೆಸ್ (ಐ) ಪಕ್ಷದ ಹಾಲಿ ಹಿರಿಯ ಉಪಾಧ್ಯಕ್ಷೆ, ಮಾಜಿ ಮಹಿಳಾ ಅಧ್ಯಕ್ಷೆ ಜಾನೆಟ್ ಎಲ್.ಡಿ’ಸೋಜಾ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ (ಬೂಡಾ) ಮಾಜಿ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ಬೂಡ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.