ಮುಂಡ್ಕೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತವಾಗಿದೆ. ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ರಕ್ತದಾನದಿಂದ ಅನೇಕ ದೈಹಿಕ ಪ್ರಯೋಜನಗಳಿವೆ ಎಂದು ಪೊಂಪೈ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ ಬಿ ಹೇಳಿದರು .
ಅವರು ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್ ಮಂಗಳೂರು ಇವರ ನೇತೃತ್ವದಲ್ಲಿ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ ಸಚ್ಚರ ಪರಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು ಬ್ಲಡ್ ಬ್ಯಾಂಕ್ ಮ್ಯಾನೇಜರ್ ಗೋಪಾಲಕೃಷ್ಣ ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ಪ ಸಪಲಿಗ ಎನ್.ಎಸ್.ಎಸ್ ಅಧಿಕಾರಿ ಪೃಥ್ವಿರಾಜ್ ಎನ್ ಸಿ ಸಿ ಅಧಿಕಾರಿ ನಿಶ್ಮಿತ್ ಫೆರ್ನಾಂಡಿಸ್, ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಹರೀಶ್ ಸಚ್ಚೆರಿಪೇಟೆ, ದುರ್ಗಾ ಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಹರೀಶ ಸಪಳಿಗ, ನಮ್ಮ ಜವನೆರ್ ಅಧ್ಯಕ್ಷ ಗುರುತಿಲಕ್, ನಿತ್ಯಾನಂದ ಫೋರ್ಸ್ ಕ್ಲಬ್ ಅಧ್ಯಕ್ಷ ಕಿಶಾನ್ ಶೆಟ್ಟಿ ,ರಾಜಾರಾಮ್ ಪೊಸ್ರಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಸಂಘ ಸಂಸ್ಥೆಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.
