HomeFresh Newsಕಾಪು ಮಾರಿಯಮ್ಮನ ದರುಶನ ಪಡೆದ ಪೌರಾಡಳಿತ ಇಲಾಖೆಯ ಸಚಿವ ಹೆಚ್ ಸಿ. ಬಾಲಕೃಷ್ಣ ಮಾಗಡಿ

ಕಾಪು ಮಾರಿಯಮ್ಮನ ದರುಶನ ಪಡೆದ ಪೌರಾಡಳಿತ ಇಲಾಖೆಯ ಸಚಿವ ಹೆಚ್ ಸಿ. ಬಾಲಕೃಷ್ಣ ಮಾಗಡಿ

ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸೆಪ್ಟೆಂಬರ್ 17ರ ಶುಕ್ರವಾರ ಕರ್ನಾಟಕ ಸರ್ಕಾರದ ಪೌರಾಡಳಿತ ಇಲಾಖೆಯ ಸಚಿವ ಮತ್ತು ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್ ಸಿ. ಬಾಲಕೃಷ್ಣ ಮಾಗಡಿ ಕುಟುಂಬ ಸಮೇತರಾಗಿ ಪತ್ನಿ ಮತ್ತು ಮಕ್ಕಳೊಂದಿಗೆ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.
ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ದೇವಳದ ಜೀರ್ಣೋದ್ಧಾರ ಕಾರ್ಯ ನಡೆದು ಬಂದ ಹಾದಿ ಮತ್ತು ಭಕ್ತರ ಪಾಲ್ಗೊಳ್ಳುವಿಕೆ ಬಗ್ಗೆ ತಿಳಿಸಿದರು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವರು ಪ್ರಪಂಚದಾದ್ಯಂತ ಇರುವ ಭಕ್ತರು ಭೇಟಿ ನೀಡುವ ಪ್ರಸಿದ್ಧ ಕ್ಷೇತ್ರ ಕಾಪು ಮಾರಿಯಮ್ಮ ದೇವಸ್ಥಾನ, ಅಮ್ಮನ ಹತ್ತಿರ ಕೇಳಿದ ಇಷ್ಟಾರ್ಥಗಳನ್ನು ಅಮ್ಮ ತನ್ನ ತಂಗಿಯ ಮೂಲಕ ನೆರವೇರಿಸುತ್ತಾಳೆ, ಎಲ್ಲಾ ಭಕ್ತರು ಇಲ್ಲಿಗೆ ಭೇಟಿ ನೀಡಿ ಅಮ್ಮನ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಮನೋಹರ್ ರಾವ್ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಧ್ಯಕ್ಷರಾದ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಶೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments