HomeFresh News"ಪಿಎಫ್ ಐ ಸೇರಿ" -ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

“ಪಿಎಫ್ ಐ ಸೇರಿ” -ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  • ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯ ವಿದೆ ಎಂದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧ ಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments