ನಾಗ್ಪುರ ಪಂಚಾಯತ್ ಸಮಿತಿ ಚುನಾವಣೆ : ಬಿಜೆಪಿಗೆ ಭಾರೀ ಮುಖಭಂಗ
ಆರೆಸ್ಸೆಸ್ ರಾಷ್ಟ್ರೀಯ ಕಚೇರಿ ಇರುವ ನಾಗಪುರ ವಲಯದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಜಿಲ್ಲೆಯ ಹದಿಮೂರು ಪಂಚಾಯತು ಸಮಿತಿಗಳಲ್ಲಿ ಒಂಬತ್ತರ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.ಮೂರು ಪಂಚಾಯತು ಸಮಿತಿಗಳು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸಿಕಿದೆ. ಒಂದರಲ್ಲಿ ಶಿವಸೇನೆಯ ಭಿನ್ನಮತೀಯ ಬಣವು ಅಧ್ಯಕ್ಷತೆಯನ್ನು ಗೆದ್ದಿದೆ. ಬಿಜೆಪಿ ಒಂದರಲ್ಲೂ ಅಧ್ಯಕ್ಷ ಸ್ಥಾನ ಗೆಲ್ಲಲು ವಿಫಲವಾಗಿದೆ. ಮೈತ್ರಿ ಕಾರಣಕ್ಕೆ ಎರಡು ಕಡೆ ಉಪಾಧ್ಯಕ್ಷ ಸ್ಥಾನವು ಬಿಜೆಪಿಗೆ ದಕ್ಕಿದೆ.