ನರೇಂದ್ರ ಮೋದಿ ಒಬ್ಬ ಹಿಟ್ಲರ್: ವೀರಪ್ಪ ಮೊಯ್ಲಿ
ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ. ಮಂಗಳೂರಿನ ಅಳಿವೆ ಬಂದರಿನಲ್ಲಿ ಹೂಳೆತ್ತುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಉಡುಪಿ, ಕಾರವಾರ ಮೀನುಗಾರಿಕಾ ಬಂದರುಗಳ ಹೂಳೆತ್ತುವ ಕೆಲಸವಾಗಬೇಕಿದೆ. ಮೀನುಗಾರರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಪ್ರಸ್ತಾವನೆ ನಮ್ಮ ಮುಂದಿದೆ ಎಂದರು.
ಮೋದಿ ಅಧಿಕಾರಕ್ಕೆ ಬಂದ ಬಳಿಕ ಕನ್ನಡಿಗರ ಕಡೆಗಣನೆಯಾಗಿದೆ. ಕರ್ನಾಟಕಕ್ಕೆ ಸಿಗಬೇಕಿದ್ದ ೩೦ ಸಾವಿರ ಮೆಡಿಕಲ್ ಸೀಟುಗಳು ಅನ್ಯ ರಾಜ್ಯದ ಪಾಲಾಗುತ್ತಿವೆ.ಇದಕ್ಕೆ ಮೋದಿಯವರ ನೀಟ್ ವ್ಯವಸ್ಥೆ ಕಾರಣವಾಗಿದೆ. ಅಣ್ಣಾಮಲೈ ಒಬ್ಬ ಸ್ಪಂಟ್ ಮಾಸ್ಟರ್, ಅವರು ಕೇವಲ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಬರುತ್ತಾರೆ, ಅವರಿಂದ ಬಿಜೆಪಿಗೆ ಲಾಭವಾಗದು ಎಂದು ಮೊಯ್ಲಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು, ಡಿ.ಆರ್ ರಾಜು, ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ,ಸುಧಾಕರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.