HomeFresh Newsರಾಷ್ಟ್ರಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ನಿಧನ

ರಾಷ್ಟ್ರಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ, ಮಲಯಾಳ ಖ್ಯಾತ ನಟ ಸಲೀಂ ಕುಮಾರ್ ಶನಿವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ್ಯುಮೋನಿಯಾಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ರಾತ್ರಿ ಸುಮಾರು 10.43 ಕ್ಕೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಲವು ವರ್ಷಗಳ ಹಿಂದೆ ಯಕೃತ್ತು ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರಿಗೆ ಶನಿವಾರ ಹಠಾತ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮಲಯಾಳ ಚಿತ್ರರಂಗದ ಚಿರಪರಿಚಿತ ಮುಖವಾಗಿದ್ದ ಸಲೀಂ ಕುಮಾರ್, ೧೯೯೦ರ ದಶಕದ ಕೊನೆಯಲ್ಲಿ ಸಿನಿಮಾಗೆ ಬರುವ ಮೊದಲು ಮಿಮಿಕ್ರಿ ಮತ್ತು ಹಾಸ್ಯ ಪ್ರದರ್ಶನಗಳ ಮೂಲಕ ಗುರುತಿಸಿಕೊಂಡಿದ್ದರು. ೧೯೯೭ರಲ್ಲಿ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರೂ, ೨೦೦೦ರ ದಶಕದಲ್ಲಿ ಅವರ ಹಾಸ್ಯ ನಟನೆಯು ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು.

ಕೇವಲ ಕಾಮಿಡಿ ಪಾತ್ರಗಳಿಗೆ ಸೀಮಿತವಾಗದ ಅವರು ಅತ್ಯುತ್ತಮ ಪೋಷಕ ನಟನಾಗಿಯೂ ಗುರುತಿಸಿಕೊಂಡಿದ್ದರು. ’ಅಚ್ಚನುರಂಙತ ವೀಡು’ ಚಿತ್ರದ ನಟನೆಗಾಗಿ ಅವರಿಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಲಭಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments