ರಾ.ಹೆ. ಹೊಂಡ ಮುಚ್ಚಲು ಸೂಕ್ತ ಕ್ರಮ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ.

ಸುರತ್ಕಲ್ ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಭೆಯನ್ನು ನಡೆಸಿದ ಡಾ. ಭರತ್ ಶೆಟ್ಟಿ ವೈ ಅವರು ಇದೇ ವೇಳೆ ಗೈಲ್ ಸಂಸ್ಥೆ ಹಾಗೂ ಜಲಸಿರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಿಸ್ ರಸ್ತೆಯಲ್ಲಿ ಅಗೆದು ಹಾಕಿದ ಹೊಂಡಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಿಸಿ, ಡಾಮರೀಕರಣ ನಡೆಸಬೇಕು ಹಾಗೂ ಜಲಸಿರಿ ಯೋಜನೆಯ ಸಂದರ್ಭ ರಸ್ತೆ ಬದಿ ಅಗೆಯುವ ವೇಳೆಗೆ ಮೂರು ಸಂಸ್ಥೆಗಳು ಸಮನ್ವಯವನ್ನ ಸಾಧಿಸಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಒಂದರ ನೂತನ ಕಟ್ಟಡವನ್ನು
ಆಗಸ್ಟ್ 20ರಂದು ಉದ್ಘಾಟಿಸಲಾಗುವುದು ಎಂದರು. ಸಾರ್ವಜನಿಕರಿಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.