ಮಂಗಳೂರು: ನಗರದ ಪ್ರತಿಷ್ಠಿತ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಶಾನ್ವಿ ಕೆ. ಅವರು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 6ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹಾಗೂ ಕರಾವಳಿಗೆ ಕೀರ್ತಿ ತಂದಿದ್ದಾರೆ.

ಸೆಪ್ಟೆಂಬರ್ 29ರಿಂದ ಅಕ್ಟೋಬರ್ 2ರವರೆಗೆ ನಡೆದ ಈ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಾನ್ವಿ ಕೆ. ಅವರು ತಮ್ಮ ಅದ್ಭುತ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ. ಅವರು 400 ಮೀಟರ್ ಮಿಕ್ಸ್ಡ್ ರಿಲೇ ವಿಭಾಗದಲ್ಲಿ ಚಿನ್ನದ ಪದಕ, 200 ಮೀಟರ್ ಬೈ-ಫಿನ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ 100 ಮೀಟರ್ ಬೈ-ಫಿನ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಮೂರು ಪದಕಗಳನ್ನು ಗೆದ್ದು ಶಾಲೆಗೆ ಹೆಮ್ಮೆ ತಂದ ಶಾನ್ವಿ ಕೆ. ಅವರ ಸಾಧನೆಯನ್ನು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ವಂ. ಫಾ. ರೋಹನ್ ಡಿ’ಅಲ್ಮೇಡಾ, ಎಸ್.ಜೆ. ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.
ಉಪಪ್ರಾಂಶುಪಾಲರಾದ ಶ್ರೀಮತಿ ಲಾರೆಲ್ ಡಿ’ಸೋಜಾ, ಶ್ರೀಮತಿ ಅಪರ್ಣಾ ಸುರೇಶ್, ಶಿಕ್ಷಕ ವೃಂದ ಹಾಗೂ ಪೋಷಕರು ಶಾನ್ವಿ ಕೆ.
ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಕ್ರೀಡಾ ಪಯಣವು ಇನ್ನಷ್ಟು ಯಶಸ್ಸಿನಿಂದ ಕೂಡಿರಲಿ ಎಂದು
ಶುಭ ಹಾರೈಸಿದ್ದಾರೆ.

