ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನ, ಅಧ್ಯಯನ ಪ್ರವಾಸ
ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನಕ್ಕೆ ಕಳೆಂಜ ಗ್ರಾಮದ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಕುದುರೆಮುಖ, ಶೃಂಗೇರಿ, ಹೊರನಾಡು, ಇತರ ಪರಿಸರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡರು.
ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ ಶುಭಕೋರಿದರು.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ಅರಣ್ಯ ಪಾಲಕರಾದ ಪ್ರಶಾಂತ್, ಅರಣ್ಯ ರಕ್ಷಕರು, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಪದ್ಮನಾಭ, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಉಪಸ್ಥಿತರಿದ್ದರು.