HomeFresh Newsನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಬೈಕ್ ಸವಾರನ ಸ್ಥಿತಿ ಗಂಭೀರ

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಬೈಕ್ ಸವಾರನ ಸ್ಥಿತಿ ಗಂಭೀರ

ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್(23ವ.) ಗಾಯಗೊಂಡವರಾಗಿದ್ದಾರೆ.

ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಲಾರಿ ಚಾಲಕ ಕೋಲ್ಪೆ ಎಂಬಲ್ಲಿ ಲಾರಿ ನಿಲ್ಲಿಸಿ ಹೊಟೇಲ್ ಗೆ ಊಟಕ್ಕೆ ಹೋಗಿದ್ದರು ಎಂದು ವರದಿಯಾಗಿದೆ. ಗಾಯಾಳು ಬೈಕ್ ಸವಾರ ದೀಕ್ಷಿತ್ ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments