ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಡಿಕ್ಕಿ: ತೀವ್ರ ಗಾಯಗೊಂಡ ಮಹಿಳೆ
ನೆಲ್ಯಾಡಿ: ಪೆರಿಯಶಾಂತಿಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರೂ ತೀವ್ರವಾದ ಗಾಯಗೊಂಡ ಘಟನೆ ಸಂಭವಿಸಿದೆ.
ಕಡಬ ಸಮೀಪದ ಕುಟ್ರುಪಾಡಿ ನಿವಾಸಿಯಾದ ರಾಜು, ಅ್ಯನಿ, ಸಿನ್ಸಿ, ಮೇರಿ ಎಂಬುವರು ಕೆನಡಕ್ಕೆ ತೆರಳುವ ಮಗನನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಅ್ಯನಿ ಎಂಬ ಮಹಿಳೆಯ ಕೈ ಹಾಗೂ ಕಾಲುಳಿಗೆ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.