ನೆಲ್ಯಾಡಿ : ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ “ಆಟಿದ ನೆಂಪುಡು ಸೋಣದ ಪೊಲಬು” ಕಾರ್ಯಕ್ರಮ ಶನಿವಾರ ದಂದು ನಡೆಯಿತು

ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ ಸಂಪ್ರದಾಯಗಳು ಮೂಲೆ ಗುಂಪಾಗುತ್ತಿದೆ. ಈ ರೀತಿಯ ಕಾರ್ಯಕ್ರಮಗಳು ಶಾಲಾ ಕಾಲೇಜುಗಳಲ್ಲಿ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಹಳೆಯ ಸಂಪ್ರದಾಯಗಳು, ಆಚಾರ ವಿಚಾರಗಳನ್ನು ಪರಿಚಯಿಸಲು ಸಾಧ್ಯವಾಗಿದೆ.

ಆಟಿ ಸಂದರ್ಭದಲ್ಲಿ ಮಾಡುವ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಚಾರ್ಯರಾದ ಏರಿಯಾಸ್ ಎಂ.ಕೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ ಶೆಟ್ಟಿ.ಕೆ., ಕಾರ್ಯಕ್ರಮದ ಸಂಯೋಜಿಕರಾದ ಉಪನ್ಯಾಸಕಿ ಗೀತಾ, ಎನ್ ಎಸ್ ಎಸ್ ತಂಡದ ನಾಯಕರಾದ ತನುಷ್, ಅನುಷ ಉಪಸ್ಥಿತರಿದ್ದರು.

ವಿಶ್ವನಾಥ ಶೆಟ್ಟಿ ಕೆ ಕಾರ್ಯಕ್ರಮ ನಿರೂಪಿಸಿದರು, ಉಪನ್ಯಾಸಕ ಮಧು ವಂದಿಸಿದರು.
ಎನ್ಎಸ್ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳು ಮನೆಯಲ್ಲಿ ತಯಾರಿಸಿ ಸುಮಾರು 50 ಬಗೆಯ ವಿವಿಧ ಬಗೆಯ ಆಟಿ ತಿಂಗಳ ವಿಶಿಷ್ಟ ಬಗೆಯ ತಿಂಡಿ ತಿನಸುಗಳನ್ನು ತಂದು ಬಡಿಸಿದರು.ಕೆಲವು ತುಳುನಾಡ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಿ ಬಹುಮಾನವನ್ನು ನೀಡಲಾಯಿತು
