ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಪಡುಬೆಟ್ಟು ನೆಲ್ಯಾಡಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಯು.,ಯಾನೆ ಸಲಾಂ ಬಿಲಾಲ್ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ.ಕ್ರೀಡಾಂಗಣ ಉದ್ಘಾಟಿಸಿದರು. ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ, ಕಡಬ ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್‍ಕುಮಾರ್ ನೆಲ್ಯಾಡಿ, ನೆಲ್ಯಾಡಿ ಸಂತಜಾರ್ಜ್ ವಿದ್ಯಾಲಯದ ಸಂಚಾಲಕ ರೆ.ಫಾ.ನೊಯಿಸ್ ಕುರಿಯಾಕೋಸ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಸಂದರ್ಭೋಚಿತವಾಗಿ ಮಾತನಾಡಿದರು.

ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಜಯಲಕ್ಷ್ಮೀಪ್ರಸಾದ್, ಪುಷ್ಪಾ ಪಡುಬೆಟ್ಟು, ಪ್ರಕಾಶ್ ಕೆ., ಪುತ್ತೂರು ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಇರ್ದೆ, ಸಿಆರ್‍ಪಿ ಪ್ರಕಾಶ್ ಬಾಕಿಲ, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಸೀತಾರಾಮ ಗೌಡ ಹಿರೇಬಂಡಾಡಿ, ಕಡಬ ತಾಲೂಕು ಸಹಶಿಕ್ಷಕರ ಸಂಘದ ಕಾರ್ಯದರ್ಶಿ ದೇವಿಪ್ರಸಾದ್, ಕಡಬ ತಾಲೂಕು ಸಹಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ದ.ಕ. ಜಿಲ್ಲಾ ಸಂಘದ ಉಪಾಧ್ಯಕ್ಷ ಮಾಮಚ್ಚನ್, ಪಡುಬೆಟ್ಟು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗುಡ್ಡಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಡುಬೆಟ್ಟು ಪ್ರೌಢಶಾಲೆ ಮುಖ್ಯಶಿಕ್ಷಕಿ ಕಮಲ ಸ್ವಾಗತಿಸಿ, ಸಹಶಿಕ್ಷಕ ಜಯಪ್ಪ ವಂದಿಸಿದರು. ಸಹಶಿಕ್ಷಕಿ ಪ್ರಭಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ನೆಲ್ಯಾಡಿ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸಲಾಂ ಬಿಲಾಲ್ ಅವರನ್ನು ಎಸ್‍ಡಿಎಂಸಿ ವತಿಯಿಂದ ಗೌರವಿಸಲಾಯಿತು.

ಬಾಲಕರ ವಿಭಾಗದಲ್ಲಿ ಪ್ರಥಮ-ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ, ದ್ವಿತೀಯ-ಮೌಂಟನ್ ವ್ಯೂ ಸ್ಕೂಲ್ ಸಾಲ್ಮರ, ಬಾಲಕಿಯರ ವಿಭಾಗದಲ್ಲಿ ಪ್ರಥಮ-ಸರಕಾರಿ ಪ್ರೌಢಶಾಲೆ ಪಾಪೆಮಜಲು, ದ್ವಿತೀಯ-ಶಿವರಾಮ ಕಾರಂತ ಪ್ರೌಢಶಾಲೆ ಪುತ್ತೂರು ನಗರ ಬಹುಮಾನ ಪಡೆದುಕೊಂಡಿವೆ.

Related Posts

Leave a Reply

Your email address will not be published.