ನೇತ್ರ ಜ್ಯೋತಿ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ
ಉಡುಪಿ: ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಡ್ರಗ್ಸ್ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರಾದ ಶಂಕರ್ ನಾಯಕರವರು ಮಾತನಾಡಿ ವಿದ್ಯಾರ್ಥಿಗಳು ದೇಶದ ಆಸ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್
ನ ಮಾಯಾಜಾಲಕ್ಕೆ ಒಳಗಾಗದಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಲೇಜಿನ ಆಡಳಿತ ನಿರ್ದೇಶಕಿ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ಮಾತನಾಡಿ ನಶಾಮುಕ್ತ ಭಾರತದ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಹೊಣೆಗಾರಿಕೆಯ ಬಗ್ಗೆ ತಿಳಿಸಿ, ಹಳೆಯ ಜೀವನ ಶೈಲಿಯನ್ನು ಒಳಗೊಂಡಂತೆ ನವೀನ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿ.ಓ.ಓ ಡಾ. ಗೌರಿ ಪ್ರಭು ಅವರು ಡ್ರಗ್ಸ್ ಬಳಕೆ ಮತ್ತು ಅದರ ದುಷ್ಪರಿಣಾಮದ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಕಾಲೇಜಿನ ಎಚ್.ಆರ್. ಶ್ರೀಮತಿ ತಾರಾ ಶಶಿಧರ್, ಕಾರ್ಡಿನೇಟರ್ ಗಳಾದ ಶ್ರೀ ಸಚಿನ ಶೇಟ್ ಮತ್ತು ಶ್ರೀ ಮಾಧವ ಪೂಜಾರಿ ಉಪಸ್ಥಿತಿರಿದ್ದರು, ಮೊದಲಿಗೆ ಕು. ಗಜಾನನ ಸ್ವಾಗತಿಸಿದರು, ಕು. ಗುರುನಾಥ್ ವಂದಿಸಿದರು. ಕು. ಭೂಮಿಕಾ ಕಾರ್ಯಕ್ರಮವನ್ನು ನಿರ್ವಹಿಸಿದರು. ನಂತರ ವಿದ್ಯಾರ್ಥಿಗಳು ಡ್ರಗ್ಸ್ ಬಳಕೆ ಮತ್ತು ದುಷ್ಪರಿಣಾಮಗಳ ಕುರಿತಾಗಿ ಲಘು ಪ್ರಹಸನ ನಡೆಸಿಕೊಟ್ಟರು.