ನೇತ್ರ ಜ್ಯೋತಿ ಕಾಲೇಜಿನಲ್ಲಿ ಓರಿಯೆಂಟೇಶನ್ ಡೇ ಕಾರ್ಯಕ್ರಮ

ಉಡುಪಿ:
ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ
ಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ ಬೇಡಿಕೆಗಳಿದ್ದು ಶ್ರಮ, ಶ್ರದ್ದೆ ಇಂದ ಓದಿದರೆ ಶ್ರೇಯಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಡಾ|ಕೃಷ್ಣ ಪ್ರಸಾದರವರ ಸಮಾಜಮುಖಿ ಕೆಲಸಗಳನ್ನು ಮುಕ್ತ ಕಂಠದಿಂದ ಹೊಗಳಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೃಷ್ಣಪ್ರಸಾದ್ ಕೂಡ್ಲುರವರು ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ತಂದೆ ತಾಯಿ, ಕಳಿಸಿದ ಗುರು, ಮತ್ತು ಶಿಕ್ಷಣ ಸಂಸ್ಥೆಯನ್ನುಯಾವಾಗಲು ನೆನಪಿನಲ್ಲಿ ಇಡಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ರಶ್ಮೀ ಕೃಷ್ಣಪ್ರಸಾದ್ ಮಾತನಾಡಿ ನೇತ್ರ ಜ್ಯೋತಿ ಕಾಲೇಜು ನಡೆದು ಬಂದ ಹಾದಿಯ ಬಗ್ಗೆ ತಿಳಿಸುತ್ತಾ ನಮ್ಮ ಕಾಲೇಜಿನಲ್ಲಿ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಒದಗಿಸಿದ್ದು ಅದರ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಕಾಲೇಜಿನ ಸಿ ಓ ಓ ಡಾ. ಗೌರಿ ಪ್ರಭುರವರು ಉಪಸ್ಥಿತರಿದ್ದು. ಕು. ಶ್ರಾವ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಮಾಧವ ಪೂಜಾರಿ ಸ್ವಾಗತಿಸಿದರು. ಕುಮಾರಿ ತೃಪ್ತಿ ನಾಯಕ್ ವಂದಿಸಿದರು.