HomeFresh Newsಕರ್ನಾಟಕ ಕಾಂಗ್ರೆಸ್ ಗೆ ನೂತನ ಜಿಲ್ಲಾಧ್ಯಕ್ಷರ ನೇಮಕ:ದ.ಕ. ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ಆರ್, ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶನ್...

ಕರ್ನಾಟಕ ಕಾಂಗ್ರೆಸ್ ಗೆ ನೂತನ ಜಿಲ್ಲಾಧ್ಯಕ್ಷರ ನೇಮಕ:ದ.ಕ. ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ಆರ್, ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶನ್ ಕುಮಾರ್ ಹೆಗ್ಡೆ

ಬೆಂಗಳೂರು: ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ (ಎಐಸಿಸಿ)ಯು ಕರ್ನಾಟಕ ರಾಜ್ಯದ ಜಿಲ್ಲಾ ಸಮಿತಿಗಳಿಗೆ (ಡಿಸಿಸಿ) ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಮತ್ತು ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶನ್ ಕುಮಾರ್ ಹೆಗ್ಡೆ ಅವರನ್ನು ಎಐಸಿಸಿ ನೇಮಿಸಿ ಆದೇಶಿಸಿದೆ. ಅದರಂತೆ ಕರ್ನಾಟಕ ರಾಜ್ಯ ಎಲ್ಲಾ ಜಿಲ್ಲೆಗಳಿಗೂ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಪಕ್ಷ ನಡೆಸಿದ ‘ಸಂಘಟನ ಸೃಜನ ಅಭಿಯಾನ’ದಡಿ ಪ್ರತೀ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸಲ್ಲಿಸಿದ ವರದಿಯ ಆಧಾರದಲ್ಲಿ ಹಾಗೂ ವೀಕ್ಷಕರು ಮತ್ತು ಹಿರಿಯ ನಾಯಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿದ ಬಳಿಕ ಜಿಲ್ಲಾಧ್ಯಕ್ಷರ ನೇಮಕವನ್ನು ಅಂತಿಮಗೊಳಿಸಲಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments