ಪುತ್ತೂರಿನಲ್ಲಿ ನಡೆದ ಭೀಕರ ಅಪಘಾತ : 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು

ಪುತ್ತೂರು: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ.

ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ ( 35) ಮೃತಪಟ್ಟವರು. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು.

ಸಂಟ್ಯಾರು-ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

ಕಾರು ಬೆಟ್ಟಂಪಾಡಿ ಕಡೆ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಅಪಘಾತಗೊಂಡು ತೋಟಕ್ಕೆ ಬಿದ್ದಿದೆ.ಕೂಡಲೇ ಸ್ಥಳೀಯರು ಗಾಯಳು ಗಳನ್ನು ಆಸ್ಪತ್ರೆಗೆ ಸಾಗಿಸಿದ್ದರೆ. ಅಪಘಾತದಲ್ಲಿ ಮುರಳಿ ಕೃಷ್ಣ ಮೃತಪಟ್ಟಿದ್ದಾರೆ. ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ , ಶಶಿಕುಮಾರ್ , ನವನೀತ್ ಹಾಗೂ ಮುರಳಿ ಮುಂಡೂರು ಎಂದು ಸ್ಥಳೀಯರು ಗುರುತಿಸಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಓರ್ವ ಗಾಯಳು ತನ್ನ ಮನೆಗೆ ಹೋಗಿದ್ದಾನೆ ಎಂದು ತಿಳಿದುಬಂದಿದೆ. ಪುತ್ತೂರು ಡಿವೈಎಸ್ಪಿ ವೀರಯ್ಯ ಹೀರೆಮಠ್ ಅಪಘಾತದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published.